ನವದೆಹಲಿ: ಅತಿ ವೇಗದ ವಾಹನ ಚಾಲನೆಯಿಂದಾಗಿ ದೇಶದಲ್ಲಿ ಪ್ರತಿ 6 ನಿಮಿಷಕ್ಕೆ ಒಬ್ಬರು ಬಲಿಯಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ ಎರಡು ನಿಮಿಷಗಳಲ್ಲಿ ಒಬ್ಬರು ಗಾಯಗೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಮಾಹಿತಿ ನೀಡಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿ ಅಂಶಗಳ ಪ್ರಕಾರ, ಕಳೆದ ವರ್ಷ ಅತಿವೇಗದ ಚಾಲನೆಯಿಂದ ಸಂಭವಿಸಿದ ಘಟನೆಗಳಲ್ಲಿ 87,050 ಜನರು ಸಾವನ್ನಪ್ಪಿದ್ದಾರೆ ಮತ್ತು 2,28,274 ಜನರು ಗಾಯಗೊಂಡಿದ್ದಾರೆ.
ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಸಾವು ಕೂಡ ಅತಿಯಾದ ವೇಗದಿಂದಲೇ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೆ ಕಾರಿನ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಸೈರಸ್ ಮಿಸ್ತ್ರಿ ಮತ್ತು ಜಹಾಂಗೀರ್ ಪಂಡೋಳೆ ಇಬ್ಬರೂ ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ಪ್ರಾಥಮಿಕ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
PublicNext
05/09/2022 07:39 pm