ಚಿಕ್ಕಮಗಳೂರು: ಗಣೇಶ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಜನ ತೀವ್ರವಾಗಿ ನಿತ್ರಾಣಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಟ್ರಾಕ್ಟರ್‌ನಲ್ಲಿದ್ದ ಪೆಂಡಾಲ್‌ಗೆ ವಿದ್ಯುತ್ ತಗುಲಿದೆ. ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ರಾಜು (47), ರಚನಾ (35), ಪಾರ್ವತಿ (26) ಮೃತಪಟ್ಟಿದ್ದಾರೆ. ಇನ್ನು ಆರು ಜನ ನಿತ್ರಾಣರಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
07/09/2022 09:11 am