ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಮಳೆಗೆ ಮನೆ ಗೋಡೆ ಕುಸಿತ; ವೃದ್ಧೆ‌ ಸಾವು

ಗದಗ: ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದು ವೃದ್ಧೆ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ.

ಸುಮಾರು 75 ವರ್ಷದ ಲಕ್ಷ್ಮವ್ವ ಮಾದರ ಮೃತ ದುರ್ದೈವಿ. ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಇಬ್ಬರು ಮಕ್ಕಳು, ಮೊಮ್ಮಕ್ಕಳು ಹಿಂದಿನ ಮನೆಯಲ್ಲಿ ಮಲಗಿದ್ದರು. ಅಜ್ಜಿ ಲಕ್ಷ್ಮವ್ವ ಮಾತ್ರ ಈ ಹಳೆ ಮನೆಯಲ್ಲಿ ಮಲಗಿದ್ದರು. ಬೆಳಗಿನ ಜಾವ ಏಕಾಏಕಿ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದಿದೆ. ನಂತರ ಸ್ಥಳಿಯರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಮೃತದೇಹ ಹೊರ ತೆಗೆದಿದ್ದಾರೆ.

ಸ್ಥಳಕ್ಕೆ ರೋಣ ತಹಶೀಲ್ದಾರ, ಸಿಪಿಐ ಹಾಗೂ ಕಂದಾಯ ನಿರೀಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಗೆ ಈ ದುರ್ಘಟನೆ ನಡೆದಿದೆ. ಈ ಕುರಿತು ಗದಗ ಜಿಲ್ಲೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

08/09/2022 12:21 pm

Cinque Terre

24.55 K

Cinque Terre

0