ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೇರಳ ಪಿಎಸ್‌ಐಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್​ ಅಂದರ್

ಬೊಮ್ಮನಹಳ್ಳಿ: ಅರೆಸ್ಟ್ ಮಾಡಲು ಬಂದಿದ್ದ ಪಿಎಸ್ಐ​ಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಡ್ರಗ್ ಪೆಡ್ಲರ್ ನ ಎಚ್ಎಸ್ಆರ್ ಲೇಔಟ್ ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ‌. ಕೇರಳ ಮೂಲದ ಜಾಫರ್ ಬಂಧಿತ ಆರೋಪಿಯಾಗಿದ್ದು,

ಕೇರಳದ ಕುರತಿಕಾಡ್ ಠಾಣೆಯಲ್ಲಿ ದಾಖಲಾಗಿದ್ದ ಎನ್.ಡಿ.ಪಿ.ಎಸ್ ಪ್ರಕರಣದ ಆರೋಪಿಯಾಗಿದ್ದ ಜಾಫರ್ ನನ್ನ ವಶಕ್ಕೆ ಪಡೆಯಲು ಕೇರಳ ಪೊಪೀಸ್ರು ಬಂದಿದ್ರು. ಆಗಸ್ಟ್ 24ರ ರಾತ್ರಿ ಎಚ್ಎಸ್ಆರ್ ಲೇಔಟ್ ವ್ಯಾಪ್ತಿಯಲ್ಲಿದ್ದ ಆರೋಪಿಯನ್ನ ವಶಕ್ಕೆ ಪಡೆಯಲು ಯತ್ನಿಸಿದ್ದರು. ಈ ವೇಳೆ ಪಿಎಸ್ಐ ಸುನುಮಾನ್ ಗೆ ರಿವಾಲ್ವಾರ್ ತೋರಿಸಿದ್ದ ಆರೋಪಿ ತನ್ನ ಸಹಚರನೊಂದಿಗೆ ಕಾರಿನಲ್ಲಿ ಎಸ್ಕೇಪ್ ಆಗುವಲ್ಲಿ ಯಶಸ್ವಿಯಾಗಿದ್ದ.

ಘಟನೆ ಸಂಬಂಧ ಕುರತಿಕಾಡ್ ಠಾಣಾ ಪಿಎಸ್ಐ ಸುನುಮಾನ್ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಸ್ತ್ರಾಸ್ತ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕೇರಳ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ ಎಚ್ಎಸ್ಆರ್ ಲೇಔಟ್ ಪೊಲೀಸರು ಕೋಲಾರ ಬಳಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Abhishek Kamoji
PublicNext

PublicNext

08/09/2022 04:29 pm

Cinque Terre

76.18 K

Cinque Terre

0

ಸಂಬಂಧಿತ ಸುದ್ದಿ