ನವದೆಹಲಿ: ಯುವತಿತೊಬ್ಬಳು ನಾಯಿಗೆ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಆಗ್ರಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯುವತಿಯು ನಾಯಿಯ ಕೊರಳುಪಟ್ಟಿ ಹಿಡಿದು ಎತ್ತಿ ಐದು ಬಾರಿ ನೆಲಕ್ಕೆ ಅಪ್ಪಳಿಸಿದ್ದಾಳೆ. ಯುವತಿಯ ಈ ಅಮಾನವೀಯ ವರ್ತನೆಗೆ ನೆಟ್ಟಿಗರು ಹಾಗೂ ಪ್ರಾಣಿ ಪ್ರಿಯರು ಕಿಡಿಕಾರಿದ್ದಾರೆ. ಆಕೆಗೆ ಸೂಕ್ತ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಹಲ್ಲೆಯಿಂದಾಗಿ ನಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.
PublicNext
12/09/2022 05:28 pm