ಹೈದರಾಬಾದ್: ಹೈದರಾಬಾದ್ನ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಕಂದರಾಬಾದ್‌ನಲ್ಲಿ ಸೋಮವಾರ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು, 6 ಜನ ಸಾವನ್ನಪ್ಪಿದ್ದಾರೆ.
ರೂಬಿ ಹೋಟೆಲ್‌ನಲ್ಲಿ ಈ ದುರಂತ ಸಂಭವಿಸಿದ್ದು, ಮಹಿಳೆ ಸೇರಿದಂತೆ 6 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡದ ಗ್ರೌಂಡ್ ಫ್ಲೋರ್ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್ನಲ್ಲೂ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ರಕ್ಷಣಾ ಸಿಬ್ಬಂದಿ ಹಲವರನ್ನ ಹೋಟೆಲ್ನಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
13/09/2022 07:40 am