ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಘೋರ ದುರಂತ: ಗೋಡೆ ಕುಸಿದು 9 ಮಂದಿ ದಾರುಣ ಸಾವು

ಲಕ್ನೋ: ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಲಕ್ನೋದ ದಿಲ್‌ಶುಕ್ ಪ್ರದೇಶದಲ್ಲಿ ನಡೆದಿದೆ.

ಮೃತ 9 ಮಂದಿಯಲ್ಲಿ ಮಕ್ಕಳು ಹಾಗೂ ಮಹಿಳೆಯರು ಸೇರಿದ್ದಾರೆ. ಘಟನಾ ಸ್ಥಳಕ್ಕೆ ಲಖನೌ ಪೊಲೀಸರು ದೌಡಾಯಿಸಿ, ರಕ್ಷಣಾ ಕಾರ್ಯವನ್ನ ಆರಂಭಿಸಿದ್ದಾರೆ. ದುರ್ಘಟನೆ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಿಎಂ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂಪಾಯಿ ಪರಿಹಾರ ಹಣವನ್ನ ಘೋಷಿಸಿದ್ದಾರೆ.

ಕಟ್ಟಡದ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣೆಗೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಈ ದುರ್ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Vijay Kumar
PublicNext

PublicNext

16/09/2022 09:44 am

Cinque Terre

46.08 K

Cinque Terre

0

ಸಂಬಂಧಿತ ಸುದ್ದಿ