ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಷಮೆ ಕೇಳಿದ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ರವಿವಾರ 54ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕತ್ರಿಗುಪ್ಪೆ ನಿವಾಸದಲ್ಲಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ಉಪ್ಪಿ ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದ ಅಭಿಮಾನಿಗಳ ಜೊತೆ ಉಪೇಂದ್ರ ಹುಟ್ಟು ಹಬ್ಬ ಆಚರಿಸಿಕೊಂಡಿರಲಿಲ್ಲ.

ಈ ಬಾರಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಹಾರ, ಕೇಕ್ ತರದಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಲಾಗಿತ್ತು. ಹೀಗಾಗಿ ರಾತ್ರಿ ನಿವಾಸದ ಬಳಿ ಅಭಿಮಾನಿಗಳು ತಂದಿದ್ದ ಕೇಕ್ ಹಾಗೂ ಹಾರಗಳನ್ನ ಉಪೇಂದ್ರ ಸ್ವೀಕರಿಸಿಲ್ಲ.ಹಾಗೆಯೇ ಅಭಿಮಾನಿಗಳ ಜೊತೆ ಪೋಟೋ ತೆಗೆಸಿಕೊಳ್ಳುವುದರ ಮೂಲಕ ರಿಯಲ್ ಸ್ಟಾರ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

ಇನ್ನು ಸಾಕಷ್ಟು ಜನ ಉಪ್ಪಿನ ಫ್ಯಾನ್ಸ್ ನೆಚ್ಚಿನ ನಟನೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳಲ್ಲಿ ಕ್ಷಮೆ ಕೇಳಿ ಟ್ವಿಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

19/09/2022 04:46 pm

Cinque Terre

31.03 K

Cinque Terre

1