ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ಕಾಲೇಜಿನ ಸೀನಿಯರ್ ಹಾಗೂ ಜೂನಿಯರ್ ವಿದ್ಯಾರ್ಥಿಗಳ ನಡುವೆ ಬುಧವಾರ ಮಧ್ಯಾಹ್ನ ನಡು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಈ ವೇಳೆ ವೇಗವಾಗಿ ಬಂದ ಕಾರೊಂದು ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಹೀಗಿದ್ದರೂ ವಿದ್ಯಾರ್ಥಿಗಳು ಜಗಳ ಮುಂದುವರಿಸಿದ್ದಾರೆ.
ಕಾರೊಂದು ವೇಗವಾಗಿ ಬರುತ್ತಿದ್ದಂತೆಯೇ ದೊಡ್ಡ ಗುಂಪು ರಸ್ತೆಯಲ್ಲಿ ಜಮಾಯಿಸಿದ್ದು, ಚೆಲ್ಲಾಪಿಲ್ಲಿಯಾಗಿದೆ. ಆದರೆ ಕಾರು ಡಿಕ್ಕಿ ಹೊಡೆದ ನಂತರ ಇಬ್ಬರು ರಸ್ತೆಯಲ್ಲಿ ಬೀಳುತ್ತಾರೆ. ಆದರೆ ಕೆಲವು ಸೆಕೆಂಡ್‌ಗಳ ನಂತರ ಜಗಳ ಪುನರಾರಂಭವಾಗುತ್ತದೆ. ಈ ಎಲ್ಲ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದ್ದು, ವಿದ್ಯಾರ್ಥಿಗಳ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಗಾಜಿಯಾಬಾದ್‌ನ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅನೇಕ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಇನ್ನು ಘಟನೆ ಸಂಭವಿಸಿದಾಗ ಕಾರಿನ ಚಾಲಕ ಜಗಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
PublicNext
22/09/2022 07:09 pm