ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾರ್ಬಾ ನೃತ್ಯ ಮಾಡುತ್ತಲೇ ಕುಸಿದು ಬಿದ್ದ ಯುವಕ ಸಾವು.!

ಗಾಂಧಿನಗರ: ಗುಜರಾತ್‌ನ ಆನಂದ್‌ನಲ್ಲಿ 21 ವರ್ಷದ ಯುವಕನೊಬ್ಬ ಗಾರ್ಬಾ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ಕುಸಿದು ಬಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು, ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಘೋಷಿಸಿದರು. ಇತ್ತೀಚಿನ ದಿನಗಳಲ್ಲಿ ಸಡನ್ ಡೆತ್‌ಗಳು ಹೆಚ್ಚಾಗುತ್ತಿವೆ. ಧಾರವಾಡದಲ್ಲಿ ಕುಸ್ತಿಪಟು ಸಂಗಪ್ಪ ಬಳಿಗೇರ ಅವರು ಸೆಪ್ಟೆಂಬರ್‌ 28ರಂದು ಬೆಳಗ್ಗೆ ವಾಯುವಿಹಾರಕ್ಕೆಂದು ಹೋಗಿದ್ದಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದರು. ಅಷ್ಟೇ ಅಲ್ಲದೆ ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದಲ್ಲಿ 20 ವರ್ಷದ ಕಲಾವಿದ ವೇದಿಕೆಯಲ್ಲಿ ನೃತ್ಯ ಮಾಡುವಾಗ ಸಾವನ್ನಪ್ಪಿದ್ದರು. ಹೀಗಾಗಿ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ನಾವು ಎಚ್ಚರವಹಿಸುವುದು ಅತ್ಯಗತ್ಯವಾಗಿದೆ.

Edited By : Vijay Kumar
PublicNext

PublicNext

03/10/2022 05:39 pm

Cinque Terre

56.9 K

Cinque Terre

0