ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನೆಗೆ ನುಗ್ಗಿ ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕನ ಕತ್ತು ಸೀಳಿ ಹತ್ಯೆ.!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾರಾಗೃಹದ ಹಿರಿಯ ಅಧಿಕಾರಿ ಹೇಮಂತ್ ಲೋಹಿಯಾ ಅವರನ್ನು ನಿವಾಸದಲ್ಲಿ ಸೋಮವಾರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮನೆಯ ಸಹಾಯಕನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮನೆ ಸಹಾಯಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಆರಂಭಿಸಲಾಗಿದೆ. ತನಿಖಾ ಪ್ರಕ್ರಿಯೆ ನಡೆಯುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಕುಟುಂಬವು ತಮ್ಮ ಹಿರಿಯ ಅಧಿಕಾರಿಯ ಸಾವಿನ ಬಗ್ಗೆ ದುಃಖಿತರಾಗಿದ್ದೇವೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಅವರನ್ನು ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದ ಜೈಲುಗಳ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು.

Edited By : Vijay Kumar
PublicNext

PublicNext

04/10/2022 09:48 am

Cinque Terre

81.84 K

Cinque Terre

14