ತುಮಕೂರು: ಚೆನ್ನಾಗಿ ಓದ್ಕೋ ಎಂದು ಪೋಷಕರು ಬುದ್ದಿ ಮಾತು ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ತಾಲೂಕಿನ ಬೆಳ್ಳಾವಿಯಲ್ಲಿ ನಡೆದಿದೆ.ಪವಿತ್ರ (18) ಮೃತ ದುರ್ದೈವಿ. ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಈಕೆಗೆ ಪೋಷಕರು ಆಟವಾಡೋದ್ರಲ್ಲಿಯೇ ಸಮಯ ವ್ಯರ್ಥ ಮಾಡುತ್ತಿಯಾ, ಓದಿಕೋ ಎಂದು ಬೈಯ್ಯುತ್ತಿದ್ದರಂತೆ. ಇದರಿಂದ ಬೇಸತ್ತ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ.
ಸ್ಥಳಕ್ಕೆ ಬೆಳ್ಳಾವಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
04/10/2022 01:10 pm