ರಾಂಚಿ: ಜಾರ್ಖಂಡ್‌ನ ಧವಯ್ಯ ಗ್ರಾಮದಲ್ಲಿ ಅಂತರ್‌ಸಮುದಾಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ 11 ಜನರನ್ನು ಬಂಧಿಸಲಾಗಿದೆ.
ಮುಸ್ಲಿಂ ಸಮುದಾಯದ ವ್ಯಕ್ತಿ ಬೇರೆ ಸಮುದಾಯದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಇದರಿಂದ ಕೋಪಗೊಂಡ ಸ್ಥಳೀಯ ನಿವಾಸಿಗಳು ಆತನ ಮೇಲೆ ಹಲ್ಲೆ ನಡೆಸಿ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಗಂಭಿರವಾಗಿ ಗಾಯಗೊಂಡ ಆತ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು 11 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
PublicNext
07/10/2022 07:29 pm