ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಕ್ಕಳ ಕಳ್ಳರ ವದಂತಿಗೆ ಅಮಾಯಕ ವ್ಯಕ್ತಿ ಬಲಿ

ಬೆಂಗಳೂರು : ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳರ ವದಂತಿ ಸದ್ಯ ಸಿಲಿಕಾನ್ ಸಿಟಿ ಬೆಂಗಳೂರನ್ನು ಆವರಿಸಿದೆ.

ಬೆಂಗಳೂರ ನಗರದ ಕೆ.ಆರ್‌.ಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಕ್ಕಳ ಕಳ್ಳರು ಎಂದು ಭಾವಿಸಿ ಸಂಜಯ್‌ ಎಂಬಾತನ ಮೇಲೆ ಜನರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಸುಳ್ಳು ವದಂತಿ ನಂಬಿ ಅಮಾಯಕ ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿದ ಕಾರಣ ಆತನ ಹೆಣ ಬಿದ್ದಿದೆ. ಜನರು ಥಳಿಸಿದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ನಗರದ ರಾಮೂರ್ತಿ ನಗರದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಪೊಲೀಸರು ವಿಚಾರಣೆ ನಡೆಸಿದಾಗ ಆತ ಮಕ್ಕಳು ಕಳ್ಳ ಆಗಿರಲಿಲ್ಲ. ಅವನು ರಾತ್ರಿ ವೇಳೆ ಕುಡಿದು ಓಡಾಡುತ್ತಿದ್ದ ಎಂದು ಮಾಹಿತಿ ತಿಳಿದುಬಂದಿದೆ. ಸಾರ್ವಜನಿಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಎಂದು ಪ್ರಕರಣ ದಾಖಲು ಮಾಡಿದ್ದರು.

ಕೊಲೆ ಕೇಸ್‌ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೆ.ಆರ್‌.ಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ

Edited By :
PublicNext

PublicNext

08/10/2022 01:11 pm

Cinque Terre

30.28 K

Cinque Terre

1