ಜೈಪುರ್: ರಾಜಸ್ಥಾನದ ಜೋಧ್‌ಪುರದಲ್ಲಿ ಅನೇಕ ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು ಮತ್ತು 16ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಹಾತ್ಮ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಅವರು ಈ ಕುರಿತು ತನಿಖೆಗೆ ಆದೇಶಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
PublicNext
08/10/2022 10:33 pm