ಬೆಂಗಳೂರು- ಕನ್ನಡದ ಹಬ್ಬಕ್ಕೆ ಕೇವಲ ನಾಲ್ಕೇ ದಿನ ಬಾಕಿ. ಈ ಹಿನ್ನಲೆಯಲ್ಲಿ ಕನ್ನಡ ನಾಡಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ದುಡಿದ 65 ಮಹನೀಯರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯು ₹1 ಲಕ್ಷ ನಗದು, 25 ಗ್ರಾಂ ಚಿನ್ನದ ಪದಕ ಒಳಗೊಂಡಿದೆ. 26 ಕ್ಷೇತ್ರಗಳಲ್ಲಿ ದುಡಿದ ಸಾಧಕರ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕೋವಿಡ್ ಹಿನ್ನಲೆಯಲ್ಲಿ ಈ ಬಾರಿಯ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುವುದು. ನವೆಂಬರ್ 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸರಳ ಸಮಾರಂಭ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ಹೇಳಿದ್ದಾರೆ.
PublicNext
28/10/2020 02:07 pm