ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾನಗರಿಯಲ್ಲಿ ಖಡಕ್ ಕಟ್ಟಪ್ಪಣೆ : MESಗೆ ಮುಖಭಂಗ,ಕರಾಳ ದಿನಕ್ಕೆ ಬ್ರೇಕ್

ಬೆಳಗಾವಿ : ಇಂದು 65ನೇ ಕರ್ನಾಟಕ ರಾಜ್ಯೋತ್ಸವ ನಾಡಿನಾದ್ಯಂತ ಸಂಭ್ರಮ ಮನೆ ಮಾಡಿದೆ. ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ.

ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಕರಾಳ ದಿನಾಚರಣೆ ಮಾಡದಂತೆ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಖಡಕ್ ಆದೇಶ ನೀಡಿದ್ದಾರೆ.

ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ.

ಕಪ್ಪು ಬಲೂನ್ ಗಳನ್ನ ಹಾರಿ ಬಿಡಲು ಸಿದ್ದತೆ ಮಾಡಿಕೊಂಡಿದ್ದಾರೆ. ನಾಡದ್ರೋಹಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಬೆಂಬಲವಿದೆ.

ಅಲ್ಲದೆ ಇಂದು ಮಹಾರಾಷ್ಟ್ರದಲ್ಲಿ ಸಚಿವರೆಲ್ಲರೂ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ.

ಬೆಳಗಾವಿ ನಗರದಾದ್ಯಂತ ಪೊಲೀಸ್ ಹೈ ಅಲರ್ಟ್ ಮಾಡಲಾಗಿದೆ.

ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Edited By : Nirmala Aralikatti
PublicNext

PublicNext

01/11/2020 08:38 am

Cinque Terre

48.79 K

Cinque Terre

12