ಹಾಸನ : ಪ್ರತೀ ವರ್ಷ ವಿಜೃಂಭಣೆಯಿಂದ ನಡೆಯುತ್ತಿದ್ದ ಹಬ್ಬ ಹರಿದಿನಗಳಿಗೆ ಈ ಬಾರಿ ಕೊರೊನಾ ಕರಿಛಾಯೆ ಆವರಿಸಿದೆ.
ಈ ಎಫೆಕ್ಟ್ ಹಾಸನದ ಹಾಸನಾಂಬೆ ದರ್ಶನಕ್ಕೂ ತಟ್ಟಿದೆ.
ಹೌದು, ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಶಕ್ತಿದೇವತೆ ಹಾಸನಾಂಬೆ ಈ ಬಾರಿ ಸಾರ್ವಜನಿಕರಿಗೆ ದರ್ಶನ ನೀಡುತ್ತಿಲ್ಲ.
ಸೋಂಕು ಹಿನ್ನೆಲೆಯಲ್ಲಿ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ ಇಂದಿನಿಂದ ನ. 15ರವರೆಗೆ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ.
ದೇವಾಲಯದ ಬಾಗಿಲು ತೆರೆಯುವ ಮೊದಲ ದಿನ ಮತ್ತು ಕೊನೆಯ ದಿನ ಆಹ್ವಾನಿತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳಿಗೆ ಮಾತ್ರ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿ ಕೊಡಲಾಗುತ್ತದೆ.
ಉಳಿದಂತೆ ಹಾಸನಾಂಬ ದೇವರ ದರ್ಶನಕ್ಕೆ ಇನ್ಯಾರಿಗೂ ಅವಕಾಶವಿಲ್ಲ.
ಹಾಸನಾಂಬ ದೇವಿಗೆ ಸಲ್ಲುವ ಪೂಜೆ ವೀಕ್ಷಿಸಲು ಅನುಕೂಲವಾಗುವಂತೆ ಸಾರ್ವಜನಿಕರಿಗೆ ಹಾಸನ ನಗರದ 10 ಕಡೆ ಎಲ್ ಇಡಿ ಪರದೆ ಅಳವಡಿಕೆ ಮಾಡಲಾಗಿದೆ.
hasanambalive2020 ಎಂದು ಸರ್ಚ್ ಮಾಡುವ ಮೂಲಕ ಯೂಟ್ಯೂಬ್ ನಿಂದ ಪೂಜೆಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ. ಈ ಬಾರಿ ಪ್ರಸಾದದ ವ್ಯವಸ್ಥೆ ಕೂಡ ಇರುವುದಿಲ್ಲ.
PublicNext
05/11/2020 07:31 am