ಬೆಂಗಳೂರು- 2021ರ ಫೆಬ್ರುವರಿ 26ರಿಂದ 28ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಹರಡುವಿಕೆಯಲ್ಲಿ ಇಳಿಕೆ ಕಾಣುತ್ತಿದೆ. ಹೀಗಾಗಿ ಸಮ್ಮೇಳನಕ್ಕೆ ಅವಕಾಶ ನೀಡಲು ಸರ್ಕಾರಕ್ಕೆ ಮನವಿ ಮಾಡಬೇಕೆಂಬ ಒಮ್ಮತದ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದೆ. ಈ ಅಭಿಪ್ರಾಯಕ್ಕೆ ಕಾರ್ಯಕಾರಿ ಸಮಿತಿಯ ಒಪ್ಪಿಗೆ ಸಿಕ್ಕಿದೆ.
PublicNext
25/11/2020 08:33 am