ಹಾವೇರಿ: 2021 ಫೆಬ್ರುವರಿ 26 ರಿಂದ 28 ರ ವರೆಗೆ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ಅಂತಿಮಗೊಳಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಹಾಗೂ ಹಾವೇರಿ ಜಿಲ್ಲಾಡಳಿತ ನಗರದ ಪಿಬಿ ರಸ್ತೆಯಲ್ಲಿರುವ ಜಿ.ಎಚ್. ಕಾಲೇಜು ಪಕ್ಕದ 20 ಎಕರೆ ಹಾಗೂ ಇದೇ ಜಮೀನಿಗೆ ಹೊಂದಿಕೊಂಡ 6ರಿಂದ 8 ಎಕರೆ ಖಾಲಿ ಜಾಗದಲ್ಲಿ ಅಕ್ಷರ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ಸ್ಥಳ ಪರಿಶೀಲನೆ ನಡೆಸಿ, ಸಮ್ಮೇಳನಕ್ಕೆ ಅತ್ಯಂತ ಸೂಕ್ತವಾದ ಜಾಗ ಇದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
21/12/2020 08:36 pm