ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಉದ್ಘಾಟನೆಗೆ ಇಬ್ಬರ ಹೆಸರು ಶಿಫಾರಸು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು, ದಸರಾ ಉದ್ಘಾಟಕರ ಆಯ್ಕೆಗೆ ಮೈಸೂರಿನ ಇಬ್ಬರ ಹೆಸರನ್ನು ಶಿಫಾರಸು ಮಾಡಲಾಗಿದೆ.

ರಾಷ್ಟ್ರಕವಿ ಕುವೆಂಪು ಅವರ ಅಳಿಯ, ಶಿವಮೊಗ್ಗ ಕುವೆಂಪು ವಿವಿ ವಿಶ್ರಾಂತ ಕುಲಪತಿಯಾದ ಪ್ರೊ.ಕೆ.ಚಿದಾನಂದಗೌಡ ಮತ್ತು ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಯಲಕ್ಷ್ಮಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಇಬ್ಬರ ಹೆಸರನ್ನು ಮೈಸೂರಿನ ಸಂಘ ಸಂಸ್ಥೆಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರಿಗೆ ಶಿಫಾರಸು ಮಾಡಿವೆ.

ಆದರೆ ಈವರೆಗೂ ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಎಸ್.ಟಿ.ಸೋಮಶೇಖರ್, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಂತಿಮವಾಗಿ ಉದ್ಘಾಟಕರ ಹೆಸರನ್ನು ಫೈನಲ್ ಮಾಡಲಾಗುವುದು' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

23/09/2021 11:58 am

Cinque Terre

27.9 K

Cinque Terre

0

ಸಂಬಂಧಿತ ಸುದ್ದಿ