ಬೆಂಗಳೂರು: ಈ ವರ್ಷದ ದೀಪಾವಳಿ ತುಸು ವಿಶೇಷತೆಯಿಂದ ಕೂಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲ ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ ಕಾರ್ಯಕ್ರಮ ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ಕಾರ್ಯಕ್ರಮಕ್ಕಾಗಿ ಆಯಾ ಜಿಲ್ಲೆಗಳ ಪಶುಸಂಗೋಪನಾ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಬಲಿಪಾಡ್ಯಮಿ ದಿನವಾದ ಶುಕ್ರವಾರ ರಾಜ್ಯದ ದೇವಾಲಯಗಳಲ್ಲಿ ಮುಜುರಾಯಿ ಇಲಾಖೆ ಸಹಯೋಗದೊಂದಿಗೆ ಗೋಪೂಜೆ ಕಾರ್ಯಕ್ರಮವನ್ನು ಪಶುಸಂಗೋಪನೆ ಇಲಾಖೆಯಿಂದ ನಡೆಸಲಾಗುತ್ತಿದೆ.ಪೂಜೆಯ ಸಂದರ್ಭಕ್ಕೆ ಹಸುಗಳನ್ನು ದೇವಾಲಯಗಳಿಗೆ ಕರೆ ತರುವ ಮತ್ತು ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ಪಶುಸಂಗೋಪನಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ.
PublicNext
04/11/2021 10:57 pm