ಬೆಳಗಾವಿ : ಕ್ರಿಸ್ ಮಸ್ ಹಬ್ಬದಲ್ಲಿ ಚರ್ಚ್ ಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಚರ್ಚ್ ಆಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿ ಕ್ರಿಸ್ ಮಸ್ ಪಾರ್ಟಿ ಮಾಡುವಂತಿಲ್ಲ ಎಂದು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಹಾಗೂ ಒಮಿಕ್ರಾನ್ ವೈರಸ್ ಆತಂಕದ ಹಿನ್ನೆಲೆಯಲ್ಲಿ ಈ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ಹೇಳಿದರು.
ಇನ್ನು ಚರ್ಚ್ ಗೆ ಆಗಮಿಸುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು ಎಂದು ಸಿಎಂ ಹೇಳಿದ್ದಾರೆ. ಕ್ರಿಸ್ ಮಸ್ ಹೆಸರಿನಲ್ಲಿ ಅಲ್ಲಲ್ಲಿ ಪಾರ್ಟಿಗಳ ಆಯೋಜನೆಗೆ ಅವಕಾಶ ನೀಡಿಲ್ಲ.
PublicNext
21/12/2021 05:40 pm