ಧಾರವಾಡ: ಧಾರವಾಡದ ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪಂ. ಎಂ.ವೆಂಕಟೇಶ ಕುಮಾರ್ ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ, ಸಾಧನೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯ ಪ್ರದೇಶ ಸರ್ಕಾರದ ಸಂಸ್ಕೃತಿ ಸಂಚನಾಲಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿಗಳ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.
PublicNext
04/02/2022 03:13 pm