ನವದೆಹಲಿ : 2021 ರ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ, ಯುಕೆ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಬ್ರಿಟಿಷ್ ಹೈಕಮಿಷನ್ ನ ವಕ್ತಾರರು ಈ ಕುರಿತು ಇನ್ನೂ ಖಾತರಿಯಾಗಿಲ್ಲ, ಆದರೆ ಬೋರಿಸ್ ಜಾನ್ಸನ್ ಅವರು ಶೀಘ್ರವೇ ಭಾರತಕ್ಕೆ ಭೇಟಿ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಪಷ್ಟ ಪಡಿಸಿದ್ದಾರೆ.
ದೂರವಾಣಿ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೋರಿಸ್ ಜಾನ್ಸನ್ರನ್ನು ಆಹ್ವಾನಿಸಿರುವುದಾಗಿ ವರದಿಯಾಗಿದೆ.
ಇಂಗ್ಲೆಂಡ್ನಲ್ಲಿ ಮುಂದಿನ ವರ್ಷ ನಡೆಯಲಿರುವ ಜಿ-7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಬೋರಿಸ್ ಆಹ್ವಾನಿಸಿದ್ದಾರೆ.
1993ರಲ್ಲಿ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಮುಖ್ಯ ಅತಿಥಿಯಾಗಿ ಬ್ರಿಟನ್ ನ ಜಾನ್ ಮೇಜರ್ ಭಾಗಿಯಾಗಿದ್ದರು. ಅನಂತರ ಇದೇ ಮೊದಲ ಬಾರಿಗೆ ಬ್ರಿಟನ್ ಪ್ರಧಾನಿಗೆ ಆಹ್ವಾನ ನೀಡಲಾಗಿದೆ.
PublicNext
02/12/2020 07:13 pm