ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧಿ ಅವರ 151 ನೇ ಜನ್ಮ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತ್ರಿ ಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ಗೆ ಭೇಟಿ ನೀಡಿ, ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇವೆ. ಗಾಂಧಿ ಅವರ ಜೀವನದಿಂದ ಮತ್ತವರ ಚಿಂತನೆಗಳಿಂದ ಬಹಳಷ್ಟು ಕಲಿಯಬೇಕಿದೆ. ಸಮೃದ್ಧ ಮತ್ತು ಸಹಾನುಭೂತಿಯ ಭಾರತವನ್ನು ಸೃಷ್ಟಿಸಲು ಬಹುಶಃ ಬಾಪು ಅವರ ಆದರ್ಶಗಳು ನಮಗೆ ಭಾರತವನ್ನು ರಚಿಸುವಲ್ಲಿ ಮಾರ್ಗದರ್ಶನ ನೀಡುತ್ತಿರುತ್ತವೆ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಶುಭಕೋರಿದ್ದಾರೆ.
ಬಳಿಕ ವಿಜಯ್ ಘಾಟ್ನಲ್ಲಿರುವ ಲಾಲ್ ಬಹದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಪುಷ್ಪನಮನ ಸಲ್ಲಿಸಿ ವಂದಿಸಿದರು.
ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತ್ರಿ ಅವರ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ.
'' ಲಾಲ್ ಬಹದ್ದೂರ್ ಶಾಸ್ತ್ರಿ ಜೀ ವಿನಮ್ರ ಮತ್ತು ದೃಢವಾಗಿದ್ದ ವ್ಯಕ್ತಿತ್ವದವರು. ಅವರು ಸರಳತೆಯನ್ನು ನಿರೂಪಿಸಿದರು ಮತ್ತು ನಮ್ಮ ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದರು. ಭಾರತಕ್ಕಾಗಿ ಅವರು ಮಾಡಿದ ಎಲ್ಲ ಸೇವೆಗೂ ಆಳವಾದ ಕೃತಜ್ಞತೆಯೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆ'' ಎಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದ್ದಾರೆ.
PublicNext
02/10/2020 10:05 am