ಚಿತ್ರದುರ್ಗ: ರಾಜ್ಯದಲ್ಲೇ ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ ಎಂದು ಗುರುತಿಸಿಕೊಂಡಿರುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆಗಾಗಿ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರು ಕತ್ತೆಗಳಿಗೆ ಮದುವೆ ಮಾಡಿಸಿದ್ದಾರೆ. ಈ ಬಾರಿ ಬಿತ್ತನೆಯಾದ ಬಳಿಕ ಮಳೆಯಾಗದೆ ಜಮೀನುಗಳಲ್ಲಿ ಬಿತ್ತಿದ ಬೀಜಗಳು ಮೊಳಕೆಯೊಡೆಯುವ ಮೊದಲೇ ಬತ್ತಿ ಹೋಗಿವೆ, ಗೋಪನಹಳ್ಳಿ ಗ್ರಾಮಸ್ಥರು ಸಂಪ್ರದಾಯ ಹಾಗು ಹಿರಿಯರ ನಂಬಿಕೆಯಂತೆ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ಮಳೆಗಾಗಿ ಪ್ರಾರ್ಥಿಸಿದ್ದಾರೆ.
PublicNext
16/08/2021 10:32 pm