ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು.

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಚಾಲನೆ. ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಸಹಿತ ಹಲವರು ಉಪಸ್ಥಿತರಿದ್ದರು.

ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

Edited By : Shivu K
PublicNext

PublicNext

07/10/2021 09:09 am

Cinque Terre

49.04 K

Cinque Terre

0

ಸಂಬಂಧಿತ ಸುದ್ದಿ