ಬೆಂಗಳೂರು: ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾಡಿನ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಮಾಹಿತಿ ನೀಡಿದ್ದಾರೆ.
ಇದೇ ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನುಡಿಜಾತ್ರೆ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ. ಇನ್ನು ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಸಾಪ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಡಾ.ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ ಮತ್ತು ಕೆ.ಎಸ್. ಭಗವಾನ್ ಅವರ ಹೆಸರು ಪರಿಷತ್ತಿನ ಮುಂದೆ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಡಾ. ದೊಡ್ಡರಂಗೇಗೌಡ ಅವರನ್ನು ಬಹುತದಿಂದ ಆಯ್ಕೆ ಮಾಡಲಾಗಿದೆ ಎಂದು ಮನು ಬಳಿಗಾರ ಅವರು ತಿಳಿಸಿದ್ದಾರೆ.
PublicNext
22/01/2021 05:42 pm