ನವದೆಹಲಿ : ಇಂದು ರಾಷ್ಟ್ರೀಯ ಹಬ್ಬ ದೇಶಕ್ಕೆ 72ನೇ ಗಣರಾಜ್ಯೋತ್ಸವದ ಸಂಭ್ರಮ. ನಾಡಿನ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯದ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ರಾಜ್ ಪಥ್ ನಲ್ಲಿ ಪ್ರತಿವರ್ಷವೂ ಗಣರಾಜ್ಯೋತ್ಸವ ಅದ್ಧೂರಿಯಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವವನ್ನು ಆಚರಿಸಲಾಗುತ್ತದೆ. ಲಕ್ಷಾಂತರ ಮಂದಿ ಸೇರಬೇಕಿದ್ದ ಈ ಕಾರ್ಯಕ್ರಮಕ್ಕೆ ಕೋವಿಡ್-19 ಅಡ್ಡ ಬಂದಿದ್ದು, 25 ಸಾವಿರ ಮಂದಿಗೆ ಅವಕಾಶ ಕಲ್ಪಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವವರಿಗೆ ಗಣರಾಜ್ಯೋತ್ಸವದಂದು ಪ್ರತಿವರ್ಷವೂ ರಾಷ್ಟ್ರಪತಿ ಪದಕ ನೀಡಲಾಗುತ್ತದೆ. 2021ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 19 ಪೊಲೀಸರು ಭಾಜನರಾಗಿದ್ದು, ಅವರಿಗೆ ಇಂದು ಪದಕ ಪ್ರದಾನ ಮಾಡಲಾಗುತ್ತದೆ.
PublicNext
26/01/2021 07:47 am