ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ವಾಕ್ಸಿನ್ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿದೆ ಡೆಡ್ಲಿ ಸೋಂಕು ಕೊರೊನಾಗೆ ಲಸಿಕೆ ಸಿದ್ದವಾಗಿದೆ. ಯಶಸ್ವಿಯಾಗಿ ದೇಶದಲ್ಲಿ ಲಸಿಕೆ ನೀಡಲಾಗುತ್ತಿರುವ 2 ಲಸಿಕೆಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಸುಳ್ಳು ಸುದ್ದಿ ಹರಡುವವರನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ.

ಸುಳ್ಳು ಸುದ್ದಿಗೆ ಓಗೊಟ್ಟು ದೇಶದಾದ್ಯಂತ ಲಸಿಕೆ ಪಡೆಯಲು ಸ್ವತಃ ಆರೋಗ್ಯ ಕಾರ್ಯಕರ್ತರೇ ಹಿಂಜರಿಯುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಈ ಕುರಿತು ರಾಜ್ಯ ಸರ್ಕಾರಗಳಿಗೆ ಪತ್ರ ಬರದಿರುವ ಕೇಂದ್ರ ಗೃಹ ಸಚಿವಾಲಯ ಮುಖ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ಲಸಿಕೆ ಸಾಮರ್ಥ್ಯ ಹೊಂದಿವೆ ಎಂದು ಸ್ವತಃ ಔಷಧಗಳ ಕುರಿತ ರಾಷ್ಟ್ರೀಯ ನಿಯಂತ್ರಣಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಇದರ ಸುಳ್ಳುಸುದ್ದಿ ಹರಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Edited By : Nirmala Aralikatti
PublicNext

PublicNext

26/01/2021 10:15 am

Cinque Terre

47.97 K

Cinque Terre

5