ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಣರಾಜ್ಯೋತ್ಸವ ಪರೇಡ್: ಯುಪಿ ರಾಮ ಮಂದಿರ ಸ್ತಬ್ಧಚಿತ್ರಕ್ಕೆ ಮೊದಲ ಸ್ಥಾನ

ನವದೆಹಲಿ: ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ರಾಮ ಮಂದಿರ ಸ್ತಬ್ಧಚಿತ್ರವು ಮೊದಲ ಸ್ಥಾನ ಪಡೆದುಕೊಂಡಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಮಾದರಿ ಒಳಗೊಂಡ, ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಎಲ್ಲರ ಗಮನ ಸೆಳೆದಿದೆ. ಸ್ತಬ್ಧಚಿತ್ರದ ಒಂದು ಬದಿಯಲ್ಲಿ, ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದವು. ಬಹುಪಾಲು ಸ್ಥಳವನ್ನು ರಾಮ ಮಂದಿರದ ಮಾದರಿ ಆವರಿಸಿದ್ದರೆ, ಮುಂಭಾಗ ಮಹರ್ಷಿ ವಾಲ್ಮೀಕಿ ಕುಳಿತ ಭಂಗಿಯಲ್ಲಿರುವ ಎತ್ತರದ ಮೂರ್ತಿ ಇತ್ತು. ಸಂತರ ವೇಷದಲ್ಲಿದ್ದ ಹಲವರು, ಕರಕುಶಲ ಕಲಾವಿದರು ಇದ್ದರು.

ಉತ್ತರ ಪ್ರದೇಶ, ಕರ್ನಾಟಕ ಸೇರಿ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ತ್ರಿಪುರಾದ ಸ್ತಬ್ಧಚಿತ್ರವು ಎರಡನೇ ಸ್ಥಾನ ಗಳಿಸಿದರೆ, ಉತ್ತರಖಾಂಡ ರಾಜ್ಯವು ಮೂರನೇ ಸ್ಥಾನ ಪಡೆದುಕೊಂಡಿದೆ.

Edited By : Vijay Kumar
PublicNext

PublicNext

29/01/2021 11:02 am

Cinque Terre

52.72 K

Cinque Terre

6