ಸೂರತ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ಜ.15 ರಿಂದ ದೇಣಿಗೆ ಸಂಗ್ರಹ ನಡೆಸುತ್ತಿದ್ದು, ಟ್ರಸ್ಟ್ ಖಾತೆಗೆ ಈವರೆಗೂ 1,511 ಕೋಟಿ ಸಂಗ್ರಹವಾಗಿರುವುದಾಗಿ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ ದೇವ ಗಿರಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಇಡೀ ರಾಷ್ಟ್ರವು ಹಣ ದಾನ ಮಾಡುತ್ತಿದೆ. ನಮ್ಮ ದೇಣಿಗೆ ಸಂಗ್ರಹ ಕಾರ್ಯದ ಮೂಲಕ ದೇಶದಾದ್ಯಂತ 4 ಲಕ್ಷ ಗ್ರಾಮಗಳು ಮತ್ತು 11 ಕೋಟಿ ಕುಟುಂಬಗಳನ್ನು ತಲುಪುವ ಗುರಿ ಇಟ್ಟುಕೊಂಡಿದ್ದೇವೆ. ಅಭಿಯಾನದ ಅಂಗವಾಗಿ ನಾನು ಸೂರತ್ ನಲ್ಲಿದ್ದೇನೆ. ಜನರು ಟ್ರಸ್ಟ್ ಗೆ ಕೊಡುಗೆ ನೀಡುತ್ತಿದ್ದಾರೆ. 492 ವರ್ಷಗಳ ನಂತರ ಧರ್ಮಕ್ಕಾಗಿ ಏನಾದರೂ ಮಾಡಲು ಜನರಿಗೆ ಇಂಥ ಅಪರೂಪದ ಅವಕಾಶ ಸಿಕ್ಕಿದೆ ಎಂದು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ದೇಗುಲ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿಂದ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಫೆಬ್ರವರಿ 27ರ ವರೆಗೂ ಇದು ಮುಂದುವರಿಯಲಿದೆ. ಫೆಬ್ರುವರಿ 11ರ ಗುರುವಾರ ಸಂಜೆಯವರೆಗೂ 1,511 ಕೋಟಿ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
PublicNext
13/02/2021 08:24 pm