ಶ್ರೀನಗರ: ಸ್ವಾತಂತ್ರ್ಯೋತ್ಸವ ಸಂಭ್ರಮ ರಂಗೇರುತ್ತಿದೆ. ಗಡಿಯಲ್ಲಿ ಸೈನಿಕರು ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಹೌದು ಪಾಕಿಸ್ತಾನದ ಸ್ವಾತಂತ್ರೋತ್ಸವದ ಅಂಗವಾಗಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು, ಶುಭ ಹಾರೈಸಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ ಧರ್ ಸೆಕ್ಟರ್ ನಲ್ಲಿರುವ ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್ ನಲ್ಲಿ ಭಾರತೀಯ ಸೇನಾ ಸಿಬ್ಬಂದಿ, ಪಾಕ್ ಸೈನಿಕರು ಸಿಹಿಯನ್ನು ನೀಡಿದರು.
ಆಗಸ್ಟ್ 14 ರಂದು ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್ ನಲ್ಲಿ ಭಾರತೀಯ ಸೇನೆಯು ಸೌಹಾರ್ದಯುತ ಸಂಬಂಧವಾಗಿ ಪಾಕಿಸ್ತಾನ ಸೈನ್ಯಕ್ಕೆ ಸಿಹಿಯನ್ನು ಉಡುಗೊರೆಯಾಗಿ ನೀಡಿತು ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿ ಎಲ್ ಒಸಿಯ ಉದ್ದಕ್ಕೂ ಶಾಂತಿ ಕಾಪಾಡುವ ಇಚ್ಛೆಯನ್ನು ಪ್ರದರ್ಶಿಸಿತು ಎಂದು ಸೇನೆಯ ಅಧಿಕಾರಿ ತಿಳಿಸಿದ್ದಾರೆ.
PublicNext
14/08/2021 04:39 pm