ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈ ಬಾರಿ ಸರಳ, ಸಾಂಪ್ರದಾಯಿಕ ದಸರಾ ಆಚರಣೆ

ಬೆಂಗಳೂರು: ಅಕ್ಟೋಬರ್ ನಲ್ಲಿ ಕೋವಿಡ್ ಮೂರನೇ ಅಲೆ ಅಪ್ಪಳಿಸುತ್ತಿರುವುದರಿಂದ ಆರೋಗ್ಯ ತಾಂತ್ರಿಕ ತಜ್ಞರ ಸಲಹೆ ಮೇರೆಗೆ ಈ ಬಾರಿಯೂ ಸರಳ ದಸರಾ ಆಚರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ, ಹತ್ತು ದಿನಗಳ ದೀಪಾಲಂಕಾರ ಮೊದಲಾದ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು. ಮೈಸೂರು, ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ನಡೆಸಲು 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದರು.

ದಸರಾ ಉತ್ಸವ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಮಿತಿಯು ಮುಖ್ಯಮಂತ್ರಿಗಳಿಗೇ ನೀಡಿತು. 2019ರ ದಸರಾ ಉತ್ಸವಕ್ಕೆ ಸಂಬಂಧಿಸಿದಂತೆ ಪಾವತಿಗೆ ಬಾಕಿ ಇರುವ 8.09 ಕೋಟಿ ರೂ. ಅನುದಾನ ಒದಗಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ವರ್ಷದಿಂದ ಸರ್ಕಾರ ಒದಗಿಸಿದ ಮೊತ್ತದಲ್ಲಿಯೇ ದಸರಾ ನಡೆಸಲು ಹಾಗೂ ದಸರಾ ಉತ್ಸವದ ಖರ್ಚು ವೆಚ್ಚದಲ್ಲಿ ಶಿಸ್ತು ಪಾಲಿಸಿ, ಲೆಕ್ಕಪತ್ರವನ್ನು ಸಮರ್ಪಕವಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Edited By : Nirmala Aralikatti
PublicNext

PublicNext

03/09/2021 08:53 pm

Cinque Terre

59.94 K

Cinque Terre

0