ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಕುಮಾರ್ ಶ್ರೀ ಲಿಂಗೈಕ್ಯರಾದ ದಿನವನ್ನು 'ದಾಸೋಹ' ದಿನವನ್ನಾಗಿ ಆಚಣೆ : ರಾಜ್ಯ ಸರ್ಕಾರದಿಂದ ಸೂಚನೆ

ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು 'ದಾಸೋಹ’ ದಾಸೋಹ ದಿನವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈಕುರಿತು ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.

Edited By : Nirmala Aralikatti
PublicNext

PublicNext

03/09/2021 10:02 pm

Cinque Terre

122.65 K

Cinque Terre

8