ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರ ರಾಜಧಾನಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ

ನವದೆಹಲಿ: ಹೆಮ್ಮಾರಿ ಕೊರೊನಾ ಸಂಭ್ರಮಗಳನ್ನು ಕಿತ್ತುಕೊಳ್ಳುತ್ತಿದೆ. ಸದ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಹೇಳಿದೆ.

ಮಂಗಳವಾರ ಹೊರಡಿಸಿರುವ ಆದೇಶದಲ್ಲಿ, ಜಿಲ್ಲಾಧಿಕಾರಿಗಳು ಮತ್ತು ಉಪ ಪೊಲೀಸ್ ಆಯುಕ್ತರು ಗಣೇಶನ ವಿಗ್ರಹಗಳನ್ನು ಟೆಂಟ್ ಅಥವಾ ಪೆಂಡಾಲ್ ನಲ್ಲಿ ಪ್ರತಿಷ್ಠಾಪಿಸದಂತೆ ನೋಡಿಕೊಳ್ಳುತ್ತಾರೆ. ಅಲ್ಲದೆ ಯಾವುದೇ ಧಾರ್ಮಿಕ ಅಥವಾ ಸಾಮಾಜಿಕ ಸ್ಥಳದಲ್ಲಿ ಜನಸಂದಣಿ ಸೇರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಡಿಡಿಎಂಎ ಹೇಳಿದೆ.

ಯಾವುದೇ ಮೆರವಣಿಗೆಗೂ ಅನುಮತಿ ನೀಡಲಾಗುವುದಿಲ್ಲ. ಆದರೆ ಮನೆಯಲ್ಲಿಯೇ ಹಬ್ಬವನ್ನು ಆಚರಿಸುವಂತೆ ಡಿಡಿಎಂಎ ಜನರಿಗೆ ಸಲಹೆ ನೀಡಿದೆ.

Edited By : Nirmala Aralikatti
PublicNext

PublicNext

08/09/2021 02:18 pm

Cinque Terre

18.75 K

Cinque Terre

0