ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ
ಯಾದಗಿರಿ: ಆದಿಕಾವ್ಯ ರಾಮಾಯಣವನ್ನು ರಚಿಸಿ, ಶ್ರೀರಾಮನ ಜೀವನ, ಆತನ ಆದರ್ಶಗಳು ಮತ್ತು ಸಾರ್ವಕಾಲಿಕ ಜೀವನ ಮೌಲ್ಯಗಳನ್ನು ತಿಳಿಸಿಕೊಟ್ಟ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು.
ಯಾದಗಿರಿ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಎಸ್ಪಿ ಡಾ. ವೇದಮೂರ್ತಿ ಹಾಗೂ ಸಿಬ್ಬಂದಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಜಯಂತಿ ಆಚರಿಸಿದರು.
ಜಿಲ್ಲೆಯ ಸುರಪುರ ನಗರದಲ್ಲಿರುವ ವಾಲ್ಮೀಕಿ ಮೂರ್ತಿಗೆ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಪೂಜೆ ಸಲ್ಲಿಸಿದರು. ಅಲ್ಲದೇ ದೇವರಗೋನಾಲ ಗ್ರಾಮದಲ್ಲಿ ಕೂಡ ವಾಲ್ಮೀಕಿ ಜಯಂತಿ ಆಚರಿಸಲಾಯಿತು.ಅದೇ ಗ್ರಾಮದಲ್ಲಿರೋ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಸಹ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಇನ್ನು ಸುರಪುರ ನಗರದಲ್ಲಿ ಯುವಕರ ತಂಡ ಬೈಕ್ ರ್ಯಾಲಿ ಮಾಡುವ ಮೂಲಕ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.
PublicNext
20/10/2021 06:06 pm