ಬೆಂಗಳೂರು: ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಅಂಗವಾಗಿ ಶುಶ್ರೂಷಕಿಯರಿಗೆ ಸನ್ಮಾನ
ಬೆಂಗಳೂರು: ದಿ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಇಂದು ಅಂತಾರಾಷ್ಟ್ರೀಯ ದಾದಿಯರ ದಿನ ಆಚರಿಸಲಾಯಿತು. ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿರುವ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 66 ಮಂದಿ ಶುಶ್ರೂಷಕಿಯರಿಗೆ ಸನ್ಮಾನ ಮಾಡಲಾಯಿತು.
ಇದೇ ವೇಳೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಫಾರ್ ಜಸ್ಟೀಸ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಟಿ ಶೃತಿ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮತ್ತು ಹುಬ್ಬಳ್ಳಿ ಪಂಜುರ್ಲಿ ಹೋಟೆಲ್ ಮಾಲೀಕ ರಾಜೇಂದ್ರ .ವಿ. ಶೆಟ್ಟಿ ಸೇರಿದಂತೆ ಅನೇಕ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿದ ಸ್ವರ್ಣ ಟೆಕ್ನೋ ಗ್ರೂಪ್ ಎಂಡಿ ವಿಎಸ್‌ವಿ ಪ್ರಸಾದ್ ಕಾರ್ಯಕ್ರಮದ ಕುರಿತು ಖುಷಿ ಹಂಚಿಕೊಂಡಿದ್ದಾರೆ.
PublicNext
30/10/2021 04:02 pm