ಬೆಳಗಾವಿ : ಇಂದು 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ ಗೋಕಾಕ ಅವರು, ಇಂದು ಬೆಳಗಾವಿ ನಗರದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಖಾಂತರ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶಿವು ದೇವರವರ್ ಹಾಗೂ ಅಭಿಮಾನಿ ಬಳಗದ ಬೆಳಗಾವಿ ನಗರ ಅಧ್ಯಕ್ಷರಾದ ಸಂಪತ್ ಕುಮಾರ್ ದೇಸಾಯಿ, ಮತ್ತು ಅನೇಕ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
PublicNext
01/11/2021 05:05 pm