ಗದಗ:ಜಿಲ್ಲೆ ಮುಂಡರಗಿ ತಾಲ್ಲೂಕಿನ ಮುರುಡಿ ಗ್ರಾಮದಲ್ಲಿ ಪ್ರತಿ ವರ್ಷ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಹಿಂದೂಗಳೆ ಆಚರಣೆ ಮಾಡುವ ಪದ್ಧತಿ ಹಿಂದಿನಿಂದಲೂ ನಡೆಯುತ್ತಿದೆ.
ಈ ಗ್ರಾಮದಲ್ಲಿ ಒಬ್ಬರೂ ಕೂಡ ಮುಸ್ಲಿಮರಿಲ್ಲ.ಆದರು ಗ್ರಾಮಸ್ಥರು ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಾ ಬಂದಿದ್ದಾರೆ.
ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿ ಮೊಹರಂ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುವುದು ಒಂದು ವಿಶೇಷ. ಮೊಹರಂ ಎಂದರೆ ಮಹ್ಮಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಪ್ರಾರಂಭ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ. ಇಸ್ಲಾಂ ಸಂಸ್ಥಾಪಕರಾದ ಮೊಹಮ್ಮದ್ ಪೈಗಂಬರ್ ಅವರ ಕೊನೆಯ ಪುತ್ರಿ ಫಾತಿಮಾ ಬೇಬಿ ಪತಿ ಹಜರತ್ ಆಲಿ ನಾಲ್ಕನೇ ಖಲೀಫರಾಗಿದ್ದರು.
ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಮೊಹರಂ.ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ.
ಈ ಊರಲ್ಲಿ ಹಿಂದುಗಳೇ ಹಬ್ಬದಲ್ಲಿ ಬರುವ ಹೆಜ್ಜೆ ಕುಣಿತ, ಮಟಕಿ ಹೆಜ್ಜೆ ಮುಂತಾದ ಪ್ರಕಾರದಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಈ ಹೆಜ್ಜೆ ಹಾಕುವುದನ್ನು ಜಾನಪದ ಕಲೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ. ಹಳ್ಳಿಗಳಲ್ಲಿ ಈ ಕುಣಿತಕ್ಕೆ ಅಲಾಯಿ ಹೆಜ್ಜೆ ಕುಣಿತ ಎಂದು ಕರೆಯಲಾಗುತ್ತದೆ.ಆದರಿಂದ ಮುರುಡಿ ಗ್ರಾಮದಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಅನಾದಿ ಕಾಲದಿಂದ ಹಿಂದೂಗಳೆ ಆಚರಣೆ ಮಾಡುತ್ತಾ ಬಂದಿದ್ದಾರೆ ಎನ್ನುತ್ತಾರೆ ಗ್ರಾಮಸ್ಥರು.
PublicNext
09/08/2022 05:09 pm