ದಾವಣಗೆರೆ : ಚಲಿಸುತ್ತಿದ್ದ ಲಾರಿ ಇದ್ದಕ್ಕಿದ್ದಂತೆ ಧಗ ಧಗನೇ ಹೊತ್ತಿ ಉರಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಗ್ರಾಮದ ಬಳಿ ನಡೆದಿದೆ.
ಸಿಮೆಂಟ್ ತುಂಬಿಕೊಂಡು ಹೊಸಪೇಟೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ, ದೊಣ್ಣೆಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಿಯಂತ್ರಣ ಮಾಡಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
PublicNext
20/01/2025 08:03 pm