ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಹೆಜ್ಜೇನು ದಾಳಿಯಿಂದ ಯುವಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಂಸಾಗರ ಗ್ರಾಮದಲ್ಲಿ ಹೆಜ್ಜೇನು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಂಸಾಗರ ಗ್ರಾಮದ ಯುವಕ 24 ವರ್ಷದ ಮಲ್ಲೇಶ್ ಮೃತ ದುರ್ದೈವಿ. ಪುಣ್ಯಸ್ಥಳ ಗ್ರಾಮದಿಂದ ಕಂಸಾಗರಕ್ಕೆ ಬೈಕ್ ನಲ್ಲಿ ಬರುತ್ತಿದ್ದಾಗ ಏಕಾಏಕಿ ಹೆಜ್ಜೇನು ಹುಳುಗಳು ದಾಳಿ ಮಾಡಿವೆ. ಹೆಜ್ಜೇನುಗಳು ಕಚ್ವಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ಮಲ್ಲೇಶ್‌ನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಲ್ಲೇಶ ಸಾವನ್ನಪ್ಪಿದ್ದಾನೆ. ಯುವಕನ ಸಾವಿನಿಂದ ಮನೆಯಲ್ಲಿ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagaraj Tulugeri
PublicNext

PublicNext

06/10/2022 07:13 pm

Cinque Terre

11.29 K

Cinque Terre

0