ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: 3 ಸಾವಿರ ಮರ ಬೆಳೆಸಿದವರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ!

ದಾವಣಗೆರೆ: ನ್ಯಾಯ ಸಿಗದೆ ಇದ್ದದ್ದಕ್ಕೆ ಸಾಲುಮರದ ವೀರಾಚಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಪರಿಸರ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಸರ ಪ್ರೇಮಿ ಸಾಲುಮರದ ಮಿಟ್ಲಕಟ್ಟೆಯ ವೀರಾಚಾರಿ ಆತ್ಮಹತ್ಯೆಗೆ ಪಡಿತರ ವಿತರಣೆಯಲ್ಲಿ ಅಕ್ರಮ ನಡೆಸಲಾಗುತ್ತಿದೆ ಎಂದು ಹೋರಾಟ ಮಾಡಿದ್ದೇ ಕಾರಣ ಎನ್ನಲಾಗಿದೆ.

ಪಡಿತರ ವಿತರಣೆಯಲ್ಲಿ ಕಡಿಮೆ ನೀಡಿ ಮೋಸ ಮಾಡಲಾಗುತ್ತಿದೆ ಎಂದು ವೀರಾಚಾರಿ ಅವರು ಆರೋಪಿಸಿದ್ದರು. ನಿನ್ನೆಯಷ್ಟೆ ಈ ಬಗ್ಗೆ ಡಿಸಿಗೆ ಮನವಿ ಸಲ್ಲಿಸಿದ್ದರು. ಕಳೆದ ಎರಡ್ಮೂರು ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದ ವೀರಾಚಾರಿ, ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 3 ಸಾವಿರ ಮರಗಳನ್ನ ಬೆಳೆಸಿದ್ದರು. ನಿತ್ಯ ಪರಿಸರ ಹಾಗೂ ಮರಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ರಾಜ್ಯೋತ್ಸವ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

ಇದೀಗ ಹೋರಾಟಕ್ಕೆ ನ್ಯಾಯ ಸಿಗದೆ ಇದ್ದದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸರ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Abhishek Kamoji
Kshetra Samachara

Kshetra Samachara

20/09/2022 12:40 pm

Cinque Terre

6.1 K

Cinque Terre

0