", "articleSection": "Politics,Cultural Activity,Government", "image": { "@type": "ImageObject", "url": "https://prod.cdn.publicnext.com/s3fs-public/229640-1736080721-dvg3.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರ...Read more" } ", "keywords": "Karnataka news, CM Siddaramaiah, youth development, social responsibility, Davanagere, Karnataka Chief Minister, Indian politics, youth empowerment, social welfare, community development, Karnataka government schemes.,Davangere,Politics,Cultural-Activity,Government", "url": "https://publicnext.com/article/nid/Davangere/Politics/Cultural-Activity/Government" }
ದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥ ವಿಕೃತರಿಂದ ಯುವ ಜನರು ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ಜಿಲ್ಲಾಡಳಿತ ಆಯೋಜಿಸಿದ್ದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು. ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದರು.
ನಾವು ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಯುವ ಜನತೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತೀ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ- ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದರು.
ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ದುಷ್ಟರಿಂದ ಯುವಜನರು ದೂರ ಉಳಿದು ಮನುಷತ್ವ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಇದರಿಂದ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಲು ಸಾಧ್ಯ ಎಂದರು.
PublicNext
05/01/2025 06:08 pm