ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ನಡೆದಿದೆ.
ಹೊನ್ನಾಳಿಯ ಅಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸಂಜೀವಿನಿ ಹಾಗೂ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳಿಗೆ ಸಹಾಯ ಧನ ಹಾಗೂ ಸುತ್ತುನಿಧಿ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯರ ಜೊತೆ ಫೋಟೋ ತೆಗೆಸಿಕೊಳ್ಳಲು ನಾ ಮುಂದು ತಾ ಮುಂದು ಅಂತಾ ಮಹಿಳೆಯರು ಮುಂದಾದರು.
64 ಸ್ತ್ರೀಶಕ್ತಿ ಸಂಘಗಳಿಗೆ ಕಿರು ಉದ್ಯಮ ಪ್ರಾರಂಭಿಸಲು ತಲಾ ಒಂದು ಲಕ್ಷ ರೂಪಾಯಿ ಹಾಗೂ 95 ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ತಲಾ 15 ಸಾವಿರ ರೂಪಾಯಿಗಳ ಸುತ್ತು ನಿಧಿ ಪ್ರೋತ್ಸಾಹಧನದ ಚೆಕ್ ವಿತರಿಸಿದ ರೇಣುಕಾಚಾರ್ಯ ಅವರನ್ನು ಹಾಡಿಹೊಗಳಿದರು.ಚೆಕ್ ಗಳನ್ನು ಪಡೆದು ರೇಣುಕಾಚಾರ್ಯ ಅವರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಮಹಿಳೆಯರು ಮುಗಿಬಿದ್ದರು. ರೇಣುಕಾಚಾರ್ಯ ಅವರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡು ಮಹಿಳೆಯರು ಸಂಭ್ರಮಿಸಿದರು.
Kshetra Samachara
20/04/2022 12:49 pm