ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಶಾಮನೂರು ಕುಟುಂಬದ ವಿರುದ್ಧ ಗುಡುಗಿದ ಕೈ ನಾಯಕರು

ದಾವಣಗೆರೆ: ವಿಧಾನಸಭೆ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವ ಹೊಸ್ತಿಲಲ್ಲೇ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಶುರುವಾಗಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಕಾರ್ಯಕರ್ತರ ಒಳಬೇಗುದಿ ಈಗ ಬೀದಿಗೆ ಬಂದಿದೆ. ದಾವಣಗೆರೆ ಜಿಲ್ಲಾ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಜಿಲ್ಲಾಧ್ಯಕ್ಷ ಎಚ್ ಬಿ ಮಂಜಪ್ಪ ನಡೆಗೆಮುಖಂಡರು ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಹಾಗೂ ಎಸ್ ಎಸ್ ಮಲ್ಲಿಕಾರ್ಜುನ ವಿರುದ್ದ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ‌.

ಹರಿಹರ ಶಾಸಕ ಎಸ್ ರಾಮಪ್ಪ, ಮಾಜಿ ಸಚಿವ ಶಿವಮೂರ್ತಿ ನಾಯ್ಕ್, ವಿಧಾನ ಪರಿಷತ್ ಸದಸ್ಯ ನೇತೃತ್ವದಲ್ಲಿ ದಾವಣಗೆರೆ ನಗರ ಹೊರಭಾಗದಲ್ಲಿ ಸಭೆ ನಡೆಸಲಾಗಿದೆ. ಪ್ರತ್ಯೇಕ ಸಭೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು.

Edited By : Nagesh Gaonkar
PublicNext

PublicNext

11/09/2022 07:37 pm

Cinque Terre

43.38 K

Cinque Terre

1