ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಸಿದ್ದರಾಮಯ್ಯ ದಾವಣಗೆರೆಯಿಂದ ಸ್ಪರ್ಧಿಸಬೇಕು: ಅಬ್ದುಲ್ ಜಬ್ಬಾರ್

ದಾವಣಗೆರೆಳ: ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಹೇಳಿದರು.

ಕೊಂಡಜ್ಜಿ ಬಳಿಯ ಶಿವಪುರ ಗ್ರಾಮದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮಲ್ಲರ ಪ್ರಯತ್ನದ ಫಲವಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತಿದೆ. ಸಿದ್ದರಾಮಯ್ಯರು ಇಲ್ಲಿ ಸ್ಪರ್ಧಿಸಿದರೆ ಅಕ್ಕಪಕ್ಕದ ಕ್ಷೇತ್ರಗಳಿಗೂ ಅನುಕೂಲವಾಗುತ್ತದೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟದ್ದು. ಇದನ್ನು ಬಿಟ್ಟರೆ ಯಾರೂ ಸಹ ಆಯ್ಕೆ ತೀರ್ಮಾನ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯರಿಗೆ ಟಿಕೆಟ್ ನೀಡದಿದ್ದರೆ ಅಲ್ಪಸಂಖ್ಯಾತರು ಇಲ್ಲವೇ ಹಿಂದುಳಿದ ವರ್ಗದ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

12/09/2022 06:15 pm

Cinque Terre

23.44 K

Cinque Terre

0