ದಾವಣಗೆರೆ: ಮಾಜಿ ಶಾಸಕ ಶಾಂತನಗೌಡ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ತಹಶೀಲ್ದಾರ್ ರಶ್ಮಿ ಅವರಿಗೆ ಅವಾಚ್ಯ ಶಬ್ದಗಳಿಂದ ಮಾಜಿ ಶಾಸಕರು ನಿಂದಿಸಿದ್ದಕ್ಕೆ ಮಹಿಳೆಯರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾಳಿಯ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.
ಹೊನ್ನಾಳಿ- ನ್ಯಾಮತಿ ಅವಳಿ ತಾಲೂಕಿನ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸೇರಿದಂತೆ ಪ್ರತಿಭಟನೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು. ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಮಾಜಿ ಶಾಸಕ ಶಾಂತಗೌಡ ವಿರುದ್ದ ಧಿಕ್ಕಾರ ಹಾಕಿದರು. ಮಾಜಿ ಶಾಸಕರು ರಾಜಕೀಯ ನಿವೃತ್ತಿ ಘೋಷಣೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
PublicNext
27/09/2022 08:02 am