ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಗೋ ಬ್ಯಾಕ್... ಗೋ ಬ್ಯಾಕ್.. ರಾಹುಲ್ ಗಾಂಧಿ ಗೋ ಬ್ಯಾಕ್...

ದಾವಣಗೆರೆ : ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಬಗ್ಗೆ ಸಿಎಂ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ವೇದಿಕೆ ಮೇಲೆಯೇ ಗೋ ಬ್ಯಾಕ್ ರಾಹುಲ್ ಗಾಂಧಿ ಎಂದು ಘೋಷಣೆ ಹಾಕಿದ್ದಾರೆ.

ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಆಯೋಜಿಸಿದ್ದ ಬಿಜೆಪಿ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಹುಲ್ ಗಾಂಧಿ ಮಾಡುತ್ತಿರುವುದು ಭಾರತ್ ಜೋಡೋ ಯಾತ್ರೆ ಅಲ್ಲ ಭಾರತ್ ತೋಡೋ ಯಾತ್ರೆ ಎಂದು ವ್ಯಂಗ್ಯವಾಡಿದರು.

ವೇದಿಕೆಯಲ್ಲಿ ಗೋ ಬ್ಯಾಕ್ ರಾಹುಲ್ ಗಾಂಧಿ ಘೋಷಣೆ ಹಾಕಿದ ಶಾಸಕ ರೇಣುಕಾಚಾರ್ಯ ಅವರಿಗೆ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿ ರಾಹುಲ್ ಗಾಂಧಿ ಗೋಬ್ಯಾಕ್ ಎಂದರು.

Edited By : Manjunath H D
PublicNext

PublicNext

30/09/2022 08:58 pm

Cinque Terre

40.39 K

Cinque Terre

6